ಮಡಿಕೇರಿ ನಗರಸಭೆ ಚುನಾವಣೆ ಬೇಡವೆಂದು ಕೋರ್ಟ್ಗೆ ಮೊರೆ : Madikeri Municipal Elections

ಮಡಿಕೇರಿ ಮಾ.೨೩ : Madikeri Municipal Elections ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲೂ ಇದು ಅತ್ಯಂತ ಗಂಭೀರ ಪರಿಸ್ಥಿತಿಗೆ ತಲುಪಿ ಸಾವಿರಾರು ಜನರು ಸಾವು ನೋವು ಅನುಭವಿಸುತ್ತಿರುವುದರಿಂದ ಏ.೨೭ ರಂದು ನಿಗಧಿಯಾಗಿರುವ ಮಡಿಕೇರಿ ನಗರಸಭೆ ಚುನಾವಣೆಯನ್ನು ಮುಂದೂಡುವುದು ಸೂಕ್ತವೆಂದು ಆಮ್ ಆದ್ಮಿ ಪಾರ್ಟಿ ತಿಳಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ಮಡಿಕೇರಿ ವೀಕ್ಷಕ ಕೋಳಿಬೈಲು ಚಿನ್ನಪ್ಪ ವೆಂಕಟೇಶ್ ಹಾಗೂ ಅಧ್ಯಕ್ಷ ಹೆಚ್.ಜಿ.ಬಾಲಸುಬ್ರಮಣ್ಯ, ದೇಶಾದ್ಯಂತ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊಡಗಿನಲ್ಲೂ ಇದೇ ಪರಿಸ್ಥಿತಿ ಇರುವುದರಿಂದ ಸಂಕಷ್ಟದ ಸಂದರ್ಭದಲ್ಲ್ಲಿ ಚುನಾವಣೆ ನಡೆಸುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
ಆಮ್ ಆದ್ಮಿ ಪಾರ್ಟಿ ರಾಜ್ಯದ ಸ್ಥಿತಿ ಗತಿಯ ಗಂಭೀರತೆಯನ್ನು ಅರಿತು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ ಚುನಾವಣೆ ಮುಂದೂಡಬೇಕೆAದು ಕೇಳಿಕೊಂಡಿದೆ. ಆದರೆ ಮುಖ್ಯ ಚುನಾವಣಾ ಆಯುಕ್ತರು ಪಕ್ಷದ ಮನವಿಯನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದರಿಂದ, ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ (PIಐ) ಮೊಕದ್ದಮೆಯನ್ನು ದಾಖಲಿಸಿದೆ ಎಂದು ತಿಳಿಸಿದ್ದಾರೆ.
ಆದರೂ ಮಡಿಕೇರಿ ನಗರಸಭಾ ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು, ನಾಲ್ಕು ವಾರ್ಡ್ಗಳಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಮ್ಮ ಪಾರ್ಟಿಯ ಪ್ರತಿನಿಧಿಗಳು ಗೆದ್ದು ಬಂದರೆ ಕುಡಿಯುವ ನೀರು, ಒಳಚರಂಡಿ, ಕಸವಿಲೇವಾರಿ, ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆ, ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಗುಣಾತ್ಮಕವಾಗಿ ಪರಿವರ್ತಿಸುವುದು, ನಿರಂತರ ವಿದ್ಯುತ್ ಸರಬರಾಜು, ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಉತ್ತಮಪಡಿಸುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭಗಳಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಮೂಲಕ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಡಿಕೇರಿ ನಗರಸಭಾ ಕಛೇರಿಯಲ್ಲಿ ಸಾರ್ವಜನಿಕರಿಗೆ ದಿನನಿತ್ಯದ ಕೆಲಸಗಳಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲಾಗುವುದು. ವಿವಿಧ ಕಡತ, ವಾಣ ಜ್ಯ ಪರವಾನಗಿ, ಮನೆ ನಿರ್ಮಾಣ ಅನುಮತಿ ಮತ್ತಿತರ ಅರ್ಜಿಗಳ ವಿಲೇವಾರಿಯಲ್ಲಾಗುತ್ತಿರುವ ಅಡಚಣೆಗಳನ್ನು ಬಗೆಹರಿಸಲು ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು.
ಮಡಿಕೇರಿ ಸುತ್ತಮುತ್ತ ಹಾಗೂ ಕೊಡಗು ಜಿಲ್ಲೆಯಾದ್ಯಂತ ಇತ್ತೀಚಿನ ವರ್ಷಗಳಲ್ಲಿ ಭೂಕುಸಿತ ಮತ್ತು ನೈಸರ್ಗಿಕ ವಿಕೋಪಗಳಿಗೆ ತುತ್ತಾಗಿ ಜನತೆ ಸಂಕಷ್ಟದಲ್ಲಿದ್ದಾರೆ. ಕಾಫಿ, ಮೆಣಸು, ಭತ್ತ, ಏಲಕ್ಕಿ, ಬೆಳೆಗಾರರು ತಾವು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ಸರ್ಕಾರ ನ್ಯಾಯವಾದ ಬೆಲೆಯನ್ನು ನಿಗಧಿ ಪಡಿಸಬೇಕೆಂದು ಅವರುಗಳು ಒತ್ತಾಯಿಸಿದ್ದಾರೆ.
ಆಮ್ ಆದ್ವಿ ಪಾರ್ಟಿ ನೇತೃತ್ವದ ದೆಹಲಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇಡೀ ದೇಶದ ಗಮನವನ್ನು ಸೆಳೆದಿದೆ. ದೆಹಲಿಯಲ್ಲಿ ವಾಸಿಸುವ ಸಾಮಾನ್ಯ ಜನರಿಗೆ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತವನ್ನು ನೀಡಿದೆ. ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ನೀಡಲಾಗುತ್ತಿದೆ. ಕುಡಿಯುವ ನೀರು, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಇದೇ ಕಾರಣದಿಂದ ಅಲ್ಲಿನ ಜನತೆ ಆಮ್ ಆದ್ಮಿ ಪಾರ್ಟಿಯನ್ನು ಮತ್ತೆ ಮತ್ತೆ ಅಧಿಕಾರಕ್ಕೆ ತರುತ್ತಿದ್ದಾರೆ ಎಂದರು.
ಪಕ್ಷದ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾಲ್ವರು ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕೋಳಿಬೈಲು ಚಿನ್ನಪ್ಪ ವೆಂಕಟೇಶ್ ಹಾಗೂ ಹೆಚ್.ಜಿ.ಬಾಲಸುಬ್ರಮಣ್ಯ ಮನವಿ ಮಾಡಿದ್ದಾರೆ.
::: ಕೋರ್ಟ್ ನಲ್ಲಿ ತಡೆಯಾಜ್ಞೆ ಸಿಗಲಿಲ್ಲ :::
ನಗರಸಭೆ ಚುನಾವಣೆ ಬೇಡವೆಂದು ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ (PIಐ) ಮೊಕದ್ದಮೆಯನ್ನು ಪಕ್ಷ ದಾಖಲಿಸಿತ್ತು. ಆದರೆ ಕೋರ್ಟ್ ಚುನಾವಣೆಯ ಪರವಾಗಿದೆ, ತಡೆಯಾಜ್ಞೆ ಸಿಗಲಿಲ್ಲ ಎಂದು ಕೋಳಿಬೈಲು ಚಿನ್ನಪ್ಪ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Latest Indian news

Popular Stories