ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ: ಬಿಎಸ್‌ವೈ

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಇಂಗಿತವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಮೆಜೆಸ್ಟಿಕ್ ಸಮೀಪದ ಅಣ್ಣಮ್ಮದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಯವರು, ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಾಡಿನ ಜನತೆಯ ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಸಿಎಂ ತಿಳಿಸಿದರು.
ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ಯಾವಾಗ ಎನ್ನುವುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಜನತಾ ಕರ್ಫ್ಯೂ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಎಚ್ಚರಿಕೆಗಳನ್ನು ಗಮನಿಸುತ್ತಿಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಮಾಡುತ್ತಿಲ್ಲ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸರಿಯಾಗಿ ಲಾಕ್ಡೌನ್ ಪಾಲನೆ ಮಾಡುತ್ತಿಲ್ಲ. ಹೀಗಾಗಿ ಬಿಗಿ ಕ್ರಮ ಅನಿವಾರ್ಯವಾಗಬಹುದು. ಇಂದು ಅಥವಾ ನಾಳೆ ಇದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Latest Indian news

Popular Stories