ರಾಜ್ಯಗಳಲ್ಲಿದೆ 1.67 ಕೋಟಿ ಡೋಸ್ ಕೋವಿಡ್ ಲಸಿಕೆ

ನವದೆಹಲಿ: ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 1.67 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 37.43 (37,43,25,560) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದ ಒಟ್ಟು 1,67,26,613 ಡೋಸ್ ಕೋವಿಡ್ ಲಸಿಕೆ ಇವೆ ಎಂದು ಹೇಳಿದೆ.
ಬುಧವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 35,75,98,947 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 48,65,110 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಮೊದಲ ಆದ್ಯತೆ ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನದಲ್ಲಿ ಇಲ್ಲಿಯವರೆಗೆ ಒಟ್ಟಾರೆ 36,13,23,548 ಮಂದಿಗೆ ಲಸಿಕೆ ನೀಡಲಾಗಿದೆ.

Latest Indian news

Popular Stories

error: Content is protected !!