ಬೀದರ್,ಜ.11:- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಕಾಂಗ್ರೆಸ್‍ನಲ್ಲಿ ನಾಯಕತ್ವ ಎಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಇಲ್ಲಿ ಪ್ರಶ್ನಿಸಿದರು.
ಬಿಜೆಪಿ ಜನಸೇವಕ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೀದರಿಗೆ ಆಗಮಿಸಿರುವ ಶೆಟ್ಟರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ದೇಶದ ಜನ ತಿರಸ್ಕರಿಸಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆ ಅಲ್ಲದೆ, ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಕಾಂಗ್ರೆಸ್ ಪಕ್ಷವನ್ನು ದೇಶದ ಜನ ತಿರಸ್ಕರಿಸಿದ್ದಾರೆ ಎಂದು ಜಗದೀಶ ಶೆಟ್ಟರ್ ಹೇಳಿದರು.