ಮಡಿಕೇರಿ ಡಿ.1 : ಕುಟ್ಟ ಕೊಡವ ಸಮಾಜದ 2019-20ನೇ ಸಾಲಿನ ಮಹಾಸಭೆ ಡಿ.9 ರಂದು ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಕುಟ್ಟ ಕೊಡವ ಸಮಾಜದ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಮಾಜದ ಸದಸ್ಯರು ಕೋವಿಡ್ ಮುಂಜಾಗೃತಾ ಕ್ರಮವಾಗಿ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಬೇಕು ಮತ್ತು ಅಂತರ ಕಾಯ್ದುಕೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.