Crime

ಕೌಟುಂಬಿಕ ಕಲಹ: ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳೊಂದಿಗೆ ನೀರಿನ ಸಂಪ್ ನಲ್ಲಿ ಹಾರಿ‌ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಗೀತಾ ರಾಮು ಚವ್ಹಾಣ (32) ಸೃಷ್ಡಿ (6) ಸಮರ್ಥ (4)
ಕಿಶನ್ (3) ಮೃತರು.‌ ಪತಿ ರಾಮು ಜೊತೆಗೆ ಪತ್ನಿ ಗೀತಾ ಜಗಳ ಮಾಡಿದ್ದಾಳೆ. ಪತಿ ಮಲಗಿದ್ದ ವೇಳೆ ಮೂವರು‌ ಮಕ್ಕಳನ್ನು ನೀರಿನ‌ ಸಂಪ್ ಗೆ ಎಸೆದ ಪಾಪಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button