ಕ್ರಿಕೆಟ್ ಪಂದ್ಯಾಟದ ವೇಳೆ ಇಬ್ಬರು ಯುವಕರ ಕೊಲೆ ಪ್ರಕರಣ: ಗುಂಡು ಹಾರಿಸಿ ಆರೋಪಿಗಳ ಬಂಧನ

ದೊಡ್ಡಬಳ್ಳಾಪುರ: ನಗರದಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆ ಇಬ್ಬರು ಯುವಕರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ ಘಟನೆ ನಡೆದಿದೆ.

ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡರೊಬ್ಬರು ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಇಬ್ಬರು ಯುವಕರು ಹತ್ಯೆಯಾಗಿದ್ದರು.

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರ ಪೊಲೀಸರು ನಗರದ ಹೊರವಲಯದ ರೈಲ್ವೆ ಕ್ರಾಸ್ ಬಳಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳಾದ ವಿನಯ್ ಮತ್ತು ತ್ರೀಮೂರ್ತಿ ಕಾಲಿಗೆ ಶೂಟ್ ಮಾಡಿದ್ದಾರೆ.

ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಗಳ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಹರೀಶ್ರವರು ಪೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Latest Indian news

Popular Stories