ಜಗಳೂರು: ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಸ್ತೆಮಾಚಿಕೆರೆ ಸಮೀಪ ಶನಿವಾರ ವರದಿಯಾಗಿದೆ.
ಪಟ್ಟಣದ ಎನ್.ಎಂ.ಕೆ. ಶಾಲೆಯ ಬಸ್ ದೇವಿಕೆರೆ ಗ್ರಾಮಕ್ಕೆ
ತೆರಳುತಿದ್ದ ವೇಳೆ ರಸ್ತೆಮಾಚಿಕೆರೆ-ಬಗ್ಗೇನಹಳ್ಳಿ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದ್ದು, ಗಾಯಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಗಳೂರು ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ ಹಾಗೂ
ಎಸ್ಎಐ ಸಾಗರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.