ಗೋಹತ್ಯೆ ನಿಷೇಧ ಕಾನೂನು ಬಗ್ಗೆ ಸಚಿವ ಪ್ರಭು ಚವ್ಹಾಣ್ ಏನು ಹೇಳಿದ್ದಾರೆ ನೋಡಿ

ಬೆಂಗಳೂರು ಡಿ 29 (ಯುಎನ್‍ಐ):- ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಕಠಿಣವಾಗಿ ಜಾರಿಗೆ ತರಲು ಇಲಾಖೆಯಿಂದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯಪಾಲರಿಂದ ಅಂಕಿತವಾದ ತಕ್ಷಣ ಇಲಾಖೆ ತೀವ್ರಗತಿಯಲ್ಲಿ ಗೋವು ಸಂರಕ್ಷಣೆಯ ಕಾರ್ಯದಲ್ಲಿ ತೊಡಗಲಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಜನಿಸುತ್ತಿರುವ ವಿದೇಶಿ ತಳಿಯ ಗಂಡು ಕರುಗಳನ್ನು ಕಟುಕರಿಗೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಹೊಸ ಕಾಯ್ದೆಯ ಪ್ರಕಾರ ಇದು ಶಿಕ್ಷಾರ್ಹ. ಪಶುಪಾಲಕರು ಗಂಡು ಕರುಗಳನ್ನು ಕನಿಷ್ಠ 6 ತಿಂಗಳವರೆಗೆ ತಾಯಿಯೊಂದಿಗೆ ಸಾಕಿ ನಂತರ ಕರುವನ್ನು ಗೋಶಾಲೆಗೆ ನೀಡಿ ಎಂದು ಸಚಿವರು ಪಶುಪಾಲಕರಲ್ಲಿ ಮನವಿ ಮಾಡಿದ್ದಾರೆ.

Latest Indian news

Popular Stories