Crime
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ – ಪ್ರಕರಣ ದಾಖಲು

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಣಿನಾಲ್ಕೂರು ಗ್ರಾಮದ ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.
ನಾಪತ್ತೆಯಾದ ಅಪ್ರಾಪ್ತ ಬಾಲಕಿ ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ ಬಗ್ಗೆ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ರಾತ್ರಿ ವೇಳೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾಗಿದೆ.