ನಾಪತ್ತೆಯಾಗಿದ್ದ ಅಂತರ್ ಧರ್ಮೀಯ ಜೋಡಿ ಲಾಡ್ಜ್’ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು, ಜ.21: ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ದಂಪತಿ ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ ಎಂ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ.

ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು.ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ದಂಪತಿಗಾಗಿ ಹುಡುಕಾಟ ನಡೆಸಿದ್ದರು. ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

Latest Indian news

Popular Stories