Crime
ಪತ್ನಿ ಸೇರಿ ಇಬ್ಬರು ಮಕ್ಕಳ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!

ಶಿಡ್ಲಘಟ್ಟ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಮತ್ತೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಯಣ್ಣೂರು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಗ್ರಾಮದ ನೇತ್ರಾ (35) ಪುತ್ರಿಯರಾದ ವರ್ಷಿತ( 7 ತರಗತಿ) ಮತ್ತು ಸ್ನೇಹ(4 ತರಗತಿ) ಮೂವರ ಮೃತದೇಹಗಳು ಸುಟ್ಟು ಕರಕಲಾಗಿದೆ.
ನೇತ್ರಾ ಅವರ ಪತಿ ಸೊಣ್ಣಪ್ಪ ಸಹ ವಿಶೇಷ ವಿಷ ಸೇವಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ತ್ರಿಮೂರ್ತಿ, ಇನ್ಸ್ ಪೆಕ್ಟರ್ ನಂದಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.