ಪುತ್ತೂರು: ಯುವತಿ ನಾಪತ್ತೆ

ಪುತ್ತೂರು, ನ.21: ಹದಿಹರೆಯದ ಯುವತಿ ಶನಿವಾರ ಮಧ್ಯರಾತ್ರಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಾಪತ್ತೆಯಾದವರನ್ನು ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಕುಡುಗುದ್ದು ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಪುತ್ರಿ ಸಾಹಿದಾ (19) ಎಂದು ಗುರುತಿಸಲಾಗಿದೆ.

ಶನಿವಾರ ರಾತ್ರಿ ಊಟ ಮುಗಿಸಿ ಮಲಗಿದ್ದಳು ಎಂದು ಸಹಿದಾ ತಂದೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ರಾತ್ರಿ 1 ಗಂಟೆ ಸುಮಾರಿಗೆ ತಂದೆ ಪರಿಶೀಲಿಸಿದಾಗ ಮನೆಯಲ್ಲಿ ಇರಲಿಲ್ಲ.

ಉಪ್ಪಿನಂಗಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಾಪತ್ತೆಯಾಗಿರುವ ಸಾಹಿದಾ ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಪೊಲೀಸರು ವಿನಂತಿಸಿದ್ದಾರೆ.

Latest Indian news

Popular Stories