ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರರಾದ ಹೆಚ್.ವೆಂಕಟೇಶ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ವಸಂತ್ ಕುಮಾರ್ ಅವರು ಇಂದು ಸಂಜೆ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿದ್ದಾರೆ.
ಬಿಜೆಪಿ ಸಲ್ಲಿಸಿರುವಂತ ದೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಆಕ್ಷೇಪಾರ್ಹ ಟ್ವಿಟ್ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.