ಉಡುಪಿ: ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ವತಿಯಿಂದ ಮುದ್ರಣಾಲಯಗಳ ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಬನ್ನಂಜೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷರಾದ ಪ್ರಕಾಶ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಬಿಲ್ಲವ ಸಮಾಜ ಸಂಘ ಅಧ್ಯಕ್ಷರಾದ ಲಯನ್ ಗೋಪಾಲ ಬಂಗೇರ, ನಿವೃತ್ತ ಶಿಕ್ಷಕರಾದ ಮಂಜುನಾಥ ಶೆಟ್ಟಿ ಕಾರ್ಕಳ, ಮುದ್ರಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಜಿ. ಸುಬ್ಬರಾವ್ ಮುಖ್ಯ ಅತಿಥಿಗಳಾಗಿದ್ದರು.
ಕಾರ್ಯಕ್ರಮವು ಮುರಳಿಕೃಷ್ಣ ಅವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ಸಂಚಾಲಕರಾದ ಮಹೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಹಸಂಚಾಲಕರಾದ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಸಂಘದ ಉಡುಪಿ ವಲಯಾಧ್ಯಕ್ಷರಾದ ಪ್ರಶಾಂತ್ ನಾಯ್ಕ್, ಬ್ರಹ್ಮಾವರ ವಲಯಾಧ್ಯಕ್ಷರಾದ ಜೊಸೆಫ್ ಬಾಂಜ್, ಕಾಪು ವಲಯಾಧ್ಯಕ್ಷರಾದ ಸುಧೀರ್ ಬಂಗೇರ, ಕುಂದಾಪುರ ವಲಯಾಧ್ಯಕ್ಷರಾದ ವಾಸುದೇವ ವರ್ಣ ಮತ್ತು ಕಾರ್ಕಳ ವಲಯಾಧ್ಯಕ್ಷರಾದ ಪ್ರವೀಣ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ. ಶರೀಫ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ರವಿ ಬೇಳಂಜೆ ಕೊನೆಯಲ್ಲಿ ಧನ್ಯವಾದವಿತ್ತರು.