ನವದೆಹಲಿ: ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ “ಅಪರೂಪದ ಅಪರಾಧ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ಅಪಘಾತದ ನಂತರ ಅತ್ಯಂತ ಅಮಾನವೀಯವಾಗಿ ನಡೆದುಕೊಂಡ ಅಪರಾಧಿಗಳ ವಿರುದ್ಧ ಇತರರಿಗೆ ಮಾದರಿಯಾಗುವಂತಹ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಸಿಎಂ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಒತ್ತಾಯಿಸಿದ್ದಾರೆ.
“ಕಾಂಜಾವಾಲಾದಲ್ಲಿ ನಮ್ಮ ಸಹೋದರಿಗೆ ಏನಾಯಿತು ಎಂಬುದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ, “ಅಮಾನವೀಯ” ಅಪರಾಧದಿಂದ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.