ಬೆಂಗಳೂರು,ಡಿ 09(ಯುಎನ್‍ಐ):- ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧಾರಕ್ಕೆ ಬರಲಾಗುವುದು ಎಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞ ಸಮಿತಿಯೊಂದಿಗೂ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.