ಶಿಕ್ಷಕ ನೇಣಿಗೆ ಶರಣು

ವಿಜಯಪುರ: ತಹಶಿಲ್ದಾರ್ ಕಚೇರಿ ಆವರಣದಲ್ಲೇ ಶಿಕ್ಷಕನೋರ್ವ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಸಾಸಾಬಳ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ ನೇಣಿಗೆ ಶರಣಾಗಿರುವ ಶಿಕ್ಷಕ. ಅಲ್ಲದೇ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಂದಗಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories