ಉಡುಪಿ: ಗುಂಡಿಯಲ್ಲಿ ಬಿದ್ದು ಅಪರಿಚಿತ ಮೃತ್ಯು


ನಿರ್ಮಾಣ ಹಂತದ ಕಟ್ಟಡದ ಸನಿಹ ತೊಡಿಟ್ಟ ಗುಂಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆಯು ಕಲ್ಸಂಕ ಬಸ್ಸು ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ವ್ಯಕ್ತಿಯನ್ನು ಗುಂಡಿಯಿಂದ ಹೊರತೆಗೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದನ್ನು ದೃಢಕರಿಸಿದರು. ಶವವನ್ನು ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮಾಡಿದ್ದಾರೆ. ಘಟನೆಯ ಬಗ್ಗೆ ನಗರ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ನಗರ ಪೋಲಿಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Latest Indian news

Popular Stories