ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು: ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ(Congress Worker Murder). ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಎಸ್ಕೇಪ್ ಅಗಿದ್ದಾರೆ. CMH​ ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ(Murder).

ಇನ್ನು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಕೂಡ ಹಲವು ಕೇಸ್ ಗಳಿವೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಲಾಗಿದೆ.

tumakuru love murder Crime

Latest Indian news

Popular Stories