Crime

ಬೀದರ್-ನಾಳೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬೀದರ್,ಅ.3:- ಅಕ್ಟೋಬರ್ 4ರಂದು ಭಾನುವಾರ ಜರುಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ರಾಮಚಂದ್ರನ್ ಆವರು ಆದೇಶ ಹೊರಡಿಸಿದ್ದಾರೆ.
ಸದರಿ ಪರೀಕ್ಷೆಯು ಬೀದರನ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅಕ್ಟೋಬರ್ 4ರ ಬೆಳಗ್ಗೆ 8.30ರಿಂದ ಸಂಜೆ 5 ಗಂಟೆವರೆಗೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ಅವ್ಯವಹಾರ ನಡೆಯಬಾರದು.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಎಸ್‍ಟಿಡಿ, ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರು, ಜಾಗ್ರತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳು ಹಿಡಿದು ತಿರುಗುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button