ಚೆನ್ನೈ: ಚೆನ್ನೈನಲ್ಲಿ ಮೂವರು ಅಪ್ರಾಪ್ತ ಬಾಲಕಿಯರನ್ನು ತನ್ನ ಬಳಿಗೆ ಕರೆತರಲು ಒಂಬತ್ತು ವರ್ಷದ ಬಾಲಕನನ್ನು ಬಳಸಿಕೊಂಡು ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸದ್ಯ ಪರಾರಿಯಾಗಿರುವ ಆರೋಪಿಗಳು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಬಾಲಕಿಯರನ್ನು ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಕರೆತರಲು ಹುಡುಗನಿಗೆ ಆಮಿಷ ಒಡ್ಡಿದ್ದರು. ಟೆರೇಸ್ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಳರಿಂದ ಹತ್ತು ವರ್ಷದೊಳಗಿನ ಮೂವರು ಮಕ್ಕಳು ಅನೇಕ ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ ಒಬ್ಬ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಚೆನ್ನೈನ ನೀಲಂಗರೈ ಪೊಲೀಸರು ಪೋಕ್ಸೊ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ.