
Crime
ನಿರಾಶಾದಾಯಕ ಬಜೆಟ್: ರಾಮಲಿಂಗಾರೆಡ್ಡಿ ಟೀಕೆ
ಬೆಂಗಳೂರು: ಕೇಂದ್ರ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಯಾರ ಸಲಹೆಗಳನ್ನೂ ಪಡೆಯದ ವಿತ್ತ ಸಚಿವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಯಾರಿಂದಲೂ ಸಲಹೆ ಪಡೆಯಲಿಲ್ಲ. ಇವತ್ತು ಕೇಂದ್ರ ಬಜೆಟ್ ಮಂಡನೆಯಾಗಿದೆ. ಆದರೆ ರಾಜ್ಯಕ್ಕೆ ಅವರ ಕೊಡುಗೆ ಏನೇನೂ ಇಲ್ಲ ಎಂದು ಟೀಕಿಸಿದರು.
ಮೆಟ್ರೋಗೆ 14 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಇದು ಸಂಪೂರ್ಣ ನಿರಾಶಾದಾಯಕ ಬಜೆಟ್ ಆಗಿದೆ ಎಂದರು.
ಏರ್ ಇಂಡಿಯಾವನ್ನು ಖಾಸಗಿಯವರಿಗೆ ಕೊಟ್ಟಿದ್ದಾರೆ. ಕೇಂದ್ರ ಬಿಜೆಪಿಗರು ಬಂಡವಾಳ ಶಾಹಿಗಳಿಗೆ ಪರವಾಗಿದ್ದಾರೆ. ಜನಸಾಮಾನ್ಯರಿಗೆ ಯಾವ ಸಹಾಯವೂ ಇಲ್ಲ. ಅಧಿಕಾರದಲ್ಲಿ ಬಿಜೆಪಿಯವರೇ ಇದ್ದರೆ ಇವತ್ತೂ ಸಿಗುವುದಿಲ್ಲ, ಮುಂದೆಯೂ ಸಿಗುವುದಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ ರಾಮಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದರು.




