ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ವಶಕ್ಕೆ

ಮಂಗಳೂರು: ನಗರದ ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಯ ಖಾಸಗಿ ಮೆಡಿಕಲ್ ಕಾಲೇಜಿನ ಲೇಡೀಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರಹಸ್ಯವಾಗಿ ಇಟ್ಟ ಮೊಬೈಲ್ ರಿಂಗಣಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮೇ 6ರಂದು ಸಂಜೆ ಕಾಲೇಜು ಕಟ್ಟಡದ ಒಂದನೇ ಮಹಡಿಯ ಮಹಿಳೆಯರ ಶೌಚಾಲಯದಲ್ಲಿ, ಮೊಬೈಲ್ ಫೋನ್ ರಿಂಗ್ ಆಗುತ್ತಿರುವ ಶಬ್ದ ಕೇಳಿ ಬಂದಿದ್ದು, ಸೆಕ್ಯುರಿಟಿ ಗಾರ್ಡ್ ಹೋಗಿ ಪರಿಶೀಲಿಸಿದಾಗ ಶೌಚಾಲಯದ ಒಳಗಡೆ ಮೇಲ್ಬಾಗದ ಕ್ಯಾಸ್ಟ್ ಪ್ಯಾನ್ ಬಳಿ ಮೊಬೈಲ್ ಫೋನ್ ಒಂದು ಪತ್ತೆಯಾಗಿದೆ. ಈ ಬಗ್ಗೆ ಅವರು ಮಂಗಳೂರು ಉತ್ತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Latest Indian news

Popular Stories