9 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಆರ್.ಪಿ. ಕುಲಕರ್ಣಿ (ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮುಖ್ಯ ಯೋಜನಾಧಿಕಾರಿ), ವೆಂಕಟೇಶ್ (ಮಂಡ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ), ಜಿ. ಶ್ರೀಧರ್ (ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್), ಕೃಷ್ಣನ್ ಎಸ್. ಹೆಬ್ಬೂರ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಡುಪಿ ವಿಭಾಗದ ಕಾರ್ಯನಿರ್ವಾಹಕ ಎಂಜಿಜಿಯರ್), ಎಚ್.ಆರ್. ಕೃಷ್ಣಪ್ಪ (ಕೋಲಾರದ ನಗರಾಭಿವೃದ್ಧಿ ಯೋಜನಾ ಸಹಾಯಕ ನಿರ್ದೇಶಕ),
ಸುರೇಶ್ ಮೋರೆ (ಬೀದರ್ ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗದ ಕಿರಿಯ ಎಂಜಿನಿಯರ್), ಸಿದ್ದರಾಮ ಮಲ್ಲಿಕಾರ್ಜುನ್ ( ಹೆಸ್ಕಾಂನ ವಿಜಯಪುರ ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್), ಎ. ಕೃಷ್ಣಮೂರ್ತಿ (ಬೆಂಗಳೂರಿನ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ) ಮತ್ತು ಎ.ಎನ್. ವಿಜಯಕುಮಾರ್ (ಬಳ್ಳಾರಿಯ ವಿದ್ಯುತ್ ಇನ್‌ಸ್ಪೆಕ್ಟರ್) ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಈ ಎಲ್ಲ ಅಧಿಕಾರಿಗಳ ಮನೆಗಳು, ಕಚೇರಿಗಳು, ನಿಕಟವರ್ತಿಗಳಿಗೆ ಸಂಬAಧಿಸಿದ ಸ್ಥಳಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗುರುವಾರ ನಸುಕಿನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೋಧ ನಡೆಯುತ್ತಿದೆ.
ಎಸಿಬಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. 40ಕ್ಕೂ ಹೆಚ್ಚು ತಂಡಗಳಲ್ಲಿ ನೂರಾರು ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Latest Indian news

Popular Stories

error: Content is protected !!