ಲಂಚ ಸ್ವೀಕಾರ: ಜಿಎಸ್ ಟಿ ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ ಮತ್ತು ಕೇಂದ್ರ ತೆರಿಗೆ (GST) ಸೂಪರಿಂಟೆಂಡೆಂಟ್ ಜಿತೇಂದ್ರ ಕುಮಾರ್ ಡಾಗೂರ್ ಅವರು 2015-16ರಲ್ಲಿ ಆದಾಯ ತೆರಿಗೆ ವಿವರ ಸಲ್ಲಿಕೆದಾರರಿಗೆ ಸಹಾಯ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು.

ಆರೋಪಿಗೆ 5 ಲಕ್ಷ ರೂಪಾಯಿಗಳ ಅನುಕರಣೀಯ ದಂಡವನ್ನು ವಿಧಿಸಲು ಕಾರಣವನ್ನು ನೀಡಿದ ನ್ಯಾಯಾಲಯ, ತನಿಖೆ ಮತ್ತು ವಿಚಾರಣೆ ನಡೆಸಲು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಲಾಗಿರುವುದೆ ಎಂದು ಹೇಳಿದೆ.

ಡಾಗೂರ್ ಅವರು ದೇಶದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮತ್ತು ಶ್ರದ್ಧೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿತ್ತು. ಆದರೆ ಅಂತಹ ಅಧಿಕಾರಿಗಳು ತೆರಿಗೆ ಪಾವತಿಸಬೇಕಾದ ಜನರಿಗೆ ಅನುಕೂಲಕರ ಪರಿಹಾರವನ್ನು ನೀಡಲು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡರೆ, ತೆರಿಗೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ದೇಶದ ಆರ್ಥಿಕ ಸ್ಥಿತಿ ಹದಗೆಡಲಿದೆ ಎಂದು ನ್ಯಾಯಮೂರ್ತಿ ಎಚ್‌ಎ ಮೋಹನ್‌ ಹೇಳಿದರು.

ಈ ವಿಷಯಗಳನ್ನು ಫೋನ್‌ನಲ್ಲಿ ಕೇಳಬೇಡಿ, ನೀವು ಸದ್ದಿಲ್ಲದೆ ಹಣ ತಂದುಕೊಟ್ಟು ನನಗೆ ನೀಡಬೇಕು ಎಂದು ಡಾಗೂರ್ ಹೇಳಿದ್ದನ್ನು ನ್ಯಾಯಾಲಯ ಗಮನಿಸಿತು. ಈ ಸಂಭಾಷಣೆ 50,000 ರೂಪಾಯಿಗಳ ಲಂಚದ ಬಗ್ಗೆ ಸ್ಪಷ್ಟವಾಗಿ ಸೂಚಿಸುತ್ತದೆ.

ಡಾಗೂರ್ ಅವರು 2021 ರ ಮಾರ್ಚ್‌ನಲ್ಲಿ ದೂರುದಾರ ಜಗದೀಶ್ ಸುಬ್ರಾಯ್ ಭಾವೆ ಅವರಿಂದ ಉತ್ತರ ಕನ್ನಡ ವಿಭಾಗದ ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ ಹೊನ್ನಾವರ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ 25,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದಿದ್ದರು.

ದೂರುದಾರರು ತಮ್ಮ ಮೊಬೈಲ್ ಫೋನ್‌ನಲ್ಲಿ ಆಡಿಯೋ ಮತ್ತು ವಿಡಿಯೋ ಮೋಡ್‌ನಲ್ಲಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿ ಕೇಂದ್ರೀಯ ತನಿಖಾ ದಳಕ್ಕೆ (CbI) ದೂರು ಸಲ್ಲಿಸಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಲೆ ಬೀಸಿದ್ದರು.

Latest Indian news

Popular Stories