Crime

ವಾರಣಾಸಿ :ಭೀಕರ ಅಪಘಾತ,8 ಮಂದಿ ಸ್ಥಳದಲ್ಲೇ ಮೃತ್ಯು

ವಾರಾಣಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಬೆಳಿಗ್ಗೆ ಬೀಕರ ರಸ್ತೆ ಅಪಘಾತ ಸಂಭಾವಿಸಿದ್ದು 8 ಮಂದಿ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿದಂತೆ ಎಂಟು ಮಂದಿ
ಸ್ಥಳದಲ್ಲೇ ಮೃತಪಟ್ಟಿದ್ದು 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ.

ಪೊಲೀಸರು ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button