Crime

ಬಸ್ ಕಂದಕಕ್ಕೆ ಉರುಳಿ ಬಿದ್ದು 7 ಮಂದಿ ದುರ್ಮರಣ

ನೈನಿತಾಲ್: ಹರಿಯಾಣದಿಂದ ಬರುತ್ತಿದ್ದ ಬಸ್ ಉತ್ತರಾಖಂಡ್ ನ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 28 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮೃತಪಟ್ಟವರು ಐವರು ಮಹಿಳೆಯರು ಒಬ್ಬ ಪುರುಷ ಮತ್ತು ಒಂದು ಮಗು ಎನ್ನಲಾಗಿದೆ.

30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಬಿದ್ದಿದೆ.ಮೃತರ ಶವಗಳನ್ನು ವಶಪಡಿಸಿಕೊಂಡು ಎಸ್‌ಡಿಆರ್‌ಎಫ್ ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೃತರ ಶವಗಳನ್ನು ವಶಪಡಿಸಿಕೊಂಡು ಎಸ್‌ಡಿಆರ್‌ಎಫ್ ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button