
Crime
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ, 15 ಜನರಿಗೆ ಗಾಯ
ಚಿಕ್ಕಮಗಳೂರು, ಅಕ್ಟೋಬರ್, 16: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾದ ಪರಿಣಾಮ 15 ಜನರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.ರಸ್ತೆ ಮಧ್ಯೆ ಪಲ್ಟಿಯಾದ ಟಿಟಿ ವಾಹನ ಸುಮಾರು 50 ಅಡಿಯಷ್ಟು ದೂರ ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ವಾಹನ ಚಾಲಕ ಅತಿಯಾದ ವೇಗವಾಗಿ ಇದ್ದ ಕಾರಣದಿಂದಲೇ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಂತಹ ದುರ್ಘಟನೆ ಸಂಭವಿಸಿಲ್ಲ. ವಾಹನ ಪಟ್ಟಿಯಾದ ಕೂಡಲೇ ಸ್ಥಳೀಯರು ಗಾಡಿಯಲ್ಲಿದ್ದವರನ್ನು ಹೊರ ತಂದು ಯೋಗಕ್ಷೇಮ ವಿಚಾರಿಸಿದ್ದಾರೆ. ಕೆಲವರನ್ನು ಕೂಡಲೇ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.




