ಸುಳ್ಯ, ಮಾ.21: ಪಾವಗಡದಲ್ಲಿ ಉದ್ಯೋಗದಲ್ಲಿದ್ದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ತಾಲೂಕಿನ ಕೇರ್ಪಳ ನಿವಾಸಿ ಆಟೋ ಚಾಲಕ ರಮೇಶ್ ಅವರ ಪುತ್ರ ಪ್ರಜ್ವಲ್ ಕೇರ್ಪಳ (25) ಈ ದುರಂತಕ್ಕೆ ಬಲಿಯಾದ ದುರ್ದೈವಿ.
ಪ್ರಜ್ವಲ್ ಪಾವಗಡದಲ್ಲಿ ಟೋಲ್ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಬೈಕ್ ನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.