
ಕುಂದಾಪುರ, ಮಾ.24: ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸ್ಥಳೀಯರಾದ ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ಗೆ ಡಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




