Crime

ಯತ್ನಾಳ್ ವಿರುದ್ಧ ಕ್ರಮ, ಕಟೀಲ್ ಹೇಳಿಕೆ

ಬೆಂಗಳೂರು,ಜ.23:- ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಟೀಲ್, ಕೇಂದ್ರ ನಾಯಕರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.
ಅತೃಪ್ತ ಶಾಸಕರ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಆದಾಗ ಸ್ವಲ್ಪಮಟ್ಟಿಗೆ ಅಸಮಾಧಾನ ಸಹಜ ಎಂದರು.ಅತೃಪ್ತರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದರು.
ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದ್ದು ಖಾತೆ ಹಂಚಿಕೆ, ಮಂತ್ರಿ ಮಂಡಲ ರಚನೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಅಲ್ಲದೆ ಖಾತೆ ಗೊಂದಲ ನೆನ್ನೆಯೇ ಮುಖ್ಯಮಂತ್ರಿಗಳು ಶಮನ ಮಾಡಿದ್ದಾರೆ, ಪಕ್ಷದಲ್ಲಿ ಏನೇ ಸಮಸ್ಯೆ ಇದ್ರೂ ಸಿಎಂ ಸರಿ ಮಾಡಿಕೊಂಡು ಹೋಗುತ್ತಾರೆ ಎಂದು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button