ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ : ಡಿಸಿಎಂ ಡಿಕೆಶಿ

ಬೆಂಗಳೂರು: ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ‘ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ಬಗ್ಗೆ ನಮ್ಮ ಸರ್ಕಾರ ತನಿಖೆ ನಡೆಸಿದೆ.

ಆದರೆ ಬಿಜೆಪಿ ತನ್ನ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ತನಿಖೆಯೇ ನಡೆಸಲಿಲ್ಲ. ಅವರಿಗೆ ದೇಶದ ಬಗ್ಗೆ ಬದ್ಧತೆ ಇದೆಯೇ. ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು ಅವರನ್ನು ಯಾಕೆ ಬಂಧಿಸಲಿಲ್ಲ? ನಾವು ರಾಜಕೀಯ ಮಾಡಬಾರೆದು ಎಂದು ಸುಮ್ಮನಿದ್ದೆವು. ಅವರ ಈ ಡೋಂಗಿ ಆಟಗಳನ್ನು ನೋಡಿ ನಮ್ಮ ಸ್ಥಳೀಯ ಶಾಸಕರು ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದರು

Latest Indian news

Popular Stories