Crime

ಏರೋ ಇಂಡಿಯಾ 2021 ಗೆ ರಾಜ್ಯ ಆಯ್ಕೆ-ಮುಖ್ಯಮಂತ್ರಿ ಹರ್ಷ

ಬೆಂಗಳೂರು, ಅಕ್ಟೋಬರ್ 7 (ಯುಎನ್‍ಐ):- ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತಾರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ಮಾತನಾಡಿದರು.
ಕಳೆದ ಹನ್ನೆರಡು ಏರೋ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಪ್ರಸಕ್ತ ಸಾಲಿನಲ್ಲಿಯೂ ಫೆಬ್ರವರಿ 3 ರಿಂದ 7, 2021 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತಾರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಇಂತಹ ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವುದು ಕರ್ನಾಟಕ ರಾಜ್ಯ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಒಂದು ಸವಾಲಿನ ವಿಷಯ. ಏರೋ ಇಂಡಿಯಾ 2021ರ ವೆಬ್ಸೈuಟಿಜeಜಿiಟಿeಜಟ್ ಪ್ರಾರಂಭವಾದ ಕೂಡಲೇ ವಸ್ತುಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button