ಉಡುಪಿ: ಮತಾಂತರ ನಿಷೇಧ ಕಾಯ್ದೆ ವಾಪಸ್ಸಾತಿ ವಿರುದ್ಧ ಬಜರಂಗದಳ ಪ್ರತಿಭಟನೆ
ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ಪಡೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪತ್ರಿಭಟನೆ ನಡೆಸಿತು.

ವಜ್ರಾದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿಯವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಅಮಲಿನಲ್ಲಿ ಏನೇ ಮಾಡಿ ದರೂ ನಡೆಯುತ್ತದೆ ಎಂಬುದು ಸರಿಯಲ್ಲ. ಹಿಂದುಗಳ ಧಮನ ನೀತಿ ಕೈಬಿಡದಿದ್ದರೆ ಮುಂದಿನ ಆರು ತಿಂಗಳಲ್ಲಿ ಉತ್ತರ ಸಿಗಲಿದೆ ಎಂದು ಎಚ್ಚರಿಕೆ ನೀಡಿದರು.
ಬಜರಂಗದಳ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್., ಮುಖಂಡರಾದ ವಿಷ್ಣುಮೂರ್ತಿ ಆಚಾರ್ಯ, ದಿನೇಶ್ ಮೆಂಡನ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಮುಖರಾದ ಚೇತನ್ ಪೇರಲ್ಕೆ, ಕೆ.ಉದಯ ಕುಮಾರ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಕಿಣಿ, ಶ್ಯಾಮಲಾ ಕುಂದರ್, ಸುಮಿತ್ರಾ ಆರ್.ನಾಯಕ್, ಅಂಡಾರು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು