ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

ಬೀದರ ಜೂನ್ ೨೫ (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ೧೭ ಅಂಗನವಾಡಿ ಕಾರ್ಯಕರ್ತೆಯರ ೯೬ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ ೨೫ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ ೩೧ರವರೆಗೆ ಅರ್ಜಿ ಸಲ್ಲಿಸಹುದಾಗಿದೆ. ಹೆಚ್ಚಿನ ವಿವರಗಳಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ನೋಟಿಸ್ ಬೋರ್ಡ್ ಮತ್ತು ಖಾಲಿ ಇರುವ ಸ್ಥಳಗಳ ಅಂಗನವಾಡಿ ಕೇಂದ್ರಗಳಲ್ಲಿ ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಅಥವಾ ಶಾಲೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೂಡ ನೋಡಬಹುದಾಗಿದೆ. ಅರ್ಜಿಯನ್ನು https://anganwadirecruit.kar.nic.in/ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ªಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!