ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಬೇರೆ ಬೇರೆ ಸಮಾಜಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಇದನ್ನು ರಾಜ್ಯದ ಜನರು ಎಂದೂ ಕ್ಷಮಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯಿಂದ ಅಯೋಧ್ಯೆ ರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದ ದೇಶದ್ರೋಹಿಗಳನ್ನು ರಕ್ಷಿಸಲು ಸರ್ಕಾರ ಹೊರಟಿದೆ.

ಬೇರೆ ಬೇರೆ ದೇಶ ದ್ರೋಹಿಗಳನ್ನೂ ಇವರು ರಕ್ಷಣೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ನವರಿಗೆ ಅಲ್ಪಸಂಖ್ಯಾತರಿಂದಲೇ ತಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆ ಇದೆ. ಇದನ್ನು ರಾಜ್ಯದ ಜನತೆ ಕ್ಷಮಿಸಲ್ಲ ಎಂದು ಕಿಡಿಕಾರಿದರು.

Latest Indian news

Popular Stories