
Crime
ಬಿಗ್ ನ್ಯೂಸ್: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲಾ 32 ಮಂದಿ ಆರೋಪಿಗಳಿಗೆ ಕ್ಲೀನ್ ಚಿಟ್..!
ಲಖನೌ,ಸೆ.30:- 28 ವರ್ಷಗಳ ದೀರ್ಘ ಕಾಲದಿಂದ ನಡೆಯುತ್ತಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ಈ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಮಸೀದಿಯನ್ನು ಧ್ವಂಸ ಮಾಡಲಾಗಿದೆ ಎಂಬ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಎಲ್ಲ 32 ಆರೋಪಿಗಳನ್ನು ನಿರ್ದೋಷಿಗಳೆಂದು ಘೋಷಿಸಿದೆ.
ಈ ಮೂಲಕ 32 ಮಂದಿ ಆರೋಪಿಗಳಿಗೆ ಇಂದು ಕೋರ್ಟ್ ನಿಂದ ಸಿಕ್ಕಿದ ಈ ತೀರ್ಪು ಬಿಜೆಪಿಯ ಪಾಲಿಗೆ ದೊಡ್ಡ ಜಯ ಸಿಕ್ಕಿದೆ. ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಬಿಜೆಪಿಯ ನಾಯಕರು ಎಲ್ ಕೆ ಅಡ್ವಾಣಿ ನಿವಾಸಕ್ಕೆ ತೆರಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇಶವ್ಯಾಪಿ ಭಾರೀ ಬಂದೋಬಸ್ತ್ ಮಾಡಲಾಗಿದೆ.




