Crime

ಬಳ್ಳಾರಿ: ಬ್ಯಾನರ್, ಪೋಸ್ಟರ್, ಬಂಟಿಂಗ್ಸ್ ತೆರವುಗೊಳಿಸಿ – ಡಿಸಿ ನಕುಲ್

ಬಳ್ಳಾರಿ,ಅ.06:ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿ ಹಾಗೂ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಮುಕ್ತವಾಗಿ ನಡೆಸುವ ಸಂಬಂಧ ಜಿಲ್ಲೆಯಲ್ಲಿ ಬ್ಯಾನರ್,ಪೋಸ್ಟರ್,ಬಂಟಿಂಗ್ಸ್ಗಳನ್ನು ಕೂಡಲೇ ತೆರವುಗೊಳಿಸಿ ಕಚೇರಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಿ ಕರ್ನಾಟಕ ಒಪನ್ ಪ್ಲೇಸಸ್ ಆ್ಯಕ್ಟ್ 1981ರ ಪ್ರಕಾರ ಕೂಡಲೇ ತೆರವುಗೊಳಿಸುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲ ತಹಸೀಲ್ದಾರರು ತಮ್ಮ ತಾಲೂಕಿಗೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ, ನಿಗಮ ಮಂಡಳಿ,ಸಹಕಾರಿ ಸಂಘಗಳ,ಅಧ್ಯಕ್ಷ,ಉಪಾಧ್ಯಕ್ಷರ ವಾಹನಗಳನ್ನು ಹಾಗೂ ಸರಕಾರಿ ಪರಿವೀಕ್ಷಣಾ ಮಂದಿರಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಸುಪರ್ಧಿಗೆ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಚುನಾಯಿತ ಪ್ರತಿನಿಧಿಗಳು ಯಾವುದೇ ಪೂರ್ವನಿಯೋಜಿತ ಸರಕಾರಿ ಕಾರ್ಯಕ್ರಮಗಳು ಹಾಗೂ ಇತರೆ ಸಭೆ-ಸಮಾರಂಭಗಳನ್ನು ನಡೆಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವಂತೆ ತಿಳಿಸಬೇಕು ಎಂದು ಡಿಸಿ ನಕುಲ್ ಅವರು ಎಸ್ಪಿ,ಜಿಪಂ ಸಿಇಒ,ಎಸಿ,ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬರೆದ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button