Crime

ಬಳ್ಳಾರಿ: ಅ.8ರಂದು ವಿದ್ಯುತ್ ಇರಲ್ಲ

ಬಳ್ಳಾರಿ, ಅ06: ರಾಯಲ್ ಕಾಲೋನಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗೆ ಅಡ್ಡವಾಗಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಕೈಗೊಳ್ಳುತ್ತಿರುವುರಿಂದ ಎಫ್-12 ಫೀಡರ್‍ನಲ್ಲಿ ಅ.8ರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಫ್-12 ಫೀಡರ್‍ನ ವ್ಯಾಪ್ತಿಯಲ್ಲಿ ಬರುವ ರಾಯಲ್ ಕಾಲೋನಿ, ಅಲವೇಲು ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಮತ, ವೆಂಕಟೇಶ್ವರ ನಗರ, ಡಾ.ರಾಜ್‍ಕುಮಾರ್ ರಸ್ತೆ, ಬಸವರಾಜೇಶ್ವರಿ ಶಾಲೆ ಪಕ್ಕದ ಏರಿಯಾ, ಸಾಯಿಬಾಬ ಗುಡಿ ಹಿಂದುಗಡೆ, ಚಿಂತಲಪುಡಿ ಕಾಲೋನಿ, ದತ್ತಸಾಯಿ ನಗರ, ಹನುಮಾನ್ ನಗರ, ವಿಶಾಲ್ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ದುರಸ್ಥಿ ಕಾರ್ಯವು ಬೇಗನೆ ಮುಗಿದಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು.
ಈ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅವಘಡ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಹಾಗಾಗಿ ಜೆಸ್ಕಾಂ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button