ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಂಗಳವಾರ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ತನ್ನ ಕ್ಯಾಂಪಸ್‌ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಪರಪ್ಪನ ಅಗ್ರಹಾರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ 20 ವರ್ಷದ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿರುವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜುಲೈ 2023 ರಲ್ಲಿ, ಗಿರಿನಗರ ಪೊಲೀಸ್ ವ್ಯಾಪ್ತಿಯ ಹೊಸಕೆರೆಹಳ್ಳಿಯಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಯುವಕ ತನ್ನ ಜೀವನವನ್ನು ಕೊನೆಗೊಳಿಸಿದ್ದರು.