ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಇದೀಗ ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಿಸಿಕೊಳ್ಳಲಾಗಿದೆ.

Latest Indian news

Popular Stories