
CrimeDakshina Kannada
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗಳಿಗೆ ಹಲ್ಲೆ
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗಳಿಗೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯ ಶಿಶಿಲದಲ್ಲಿ ನಡೆದಿದೆ. ಘಟನೆಯಲ್ಲಿ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಶಿಲ ಗ್ರಾಮದ ಕೋಟೆಬಾಗಿಲು ನಿವಾಸಿ ಸುರೇಶ್ ಕುಡಿದ ಮತ್ತಿನಲ್ಲಿ ಪತ್ನಿಮೋಹಿನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ.
ಮೋಹಿನಿ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು ಒಂದು ಕಣ್ಣಿಗೂ ಸಂಪೂರ್ಣ ಹಾನಿಯಾಗಿದೆ.
ಸದ್ಯ ಹಲ್ಲೆಗೊಳಗಾದ ಇಬ್ಬರೂ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




