ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಇಬ್ಬರು ಮಹಿಳೆಯರ ನಡುವೆ ಸೀಟಿಗಾಗಿ ಕಿತ್ತಾಟ ನಡೆದಿದ್ದು, ಜಗಳ ತಾರಕಕ್ಕೇರಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಮೆಜೆಸ್ಟಿಕ್ ನಿಂದ ಪೀಣ್ಯಕ್ಕೆ ಹೊರಟಿದ್ದ ಬಿಎಂಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ವಿಂಡೋ ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ಗಲಾಟೆ ನಡೆದಿದ್ದು, ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.
ಗಲಾಟೆಯ ದೃಶ್ಯಗಳು ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ಹರಿದಾಡುತ್ತಿದೆ.