ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣ, ಇಬ್ಬರ ಹತ್ಯೆ

ಬೆಂಗಳೂರು: ನಗರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ರೌಡಿ ಶೀಟರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಕಾಟನ್‌ಪೇಟೆ ಮತ್ತು ಬ್ಯಾಟರಾಯನಪುರ ಪೊಲೀಸ್‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬ್ಯಾಟರಾಯನಪುರ ಪೊಲೀಸ್ ವ್ಯಾಪ್ತಿಯಲ್ಲಿ ಯೋಗೇಶ್ (23) ಎಂಬಾತನನ್ನು ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಮುನೇಶ್ವರ ಬ್ಲಾಕ್ ನಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ರಾತ್ರಿ 1.30ರ ಸುಮಾರಿಗೆ ದೇವರ ಉಥ್ಸದ ವೇಳೆ ಗಲಾಟೆ ನಡೆದಿದೆ. ಉತ್ಸವದ ತಮಟೆ ಶಬ್ಧಕ್ಕೆ ಕುಣಿಯುವಾಗ ಯುವಕರ ಮೈ ಮುಟ್ಟಿದ ಕಾರಣಕ್ಕೆ ಜಗಳವಾಗಿದೆ ಬಳಿಕ ಕೆಲವರು ಯೋಗೇಶ್’ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮೃತ ಯೋಗೇಶ್ ಗಿರಿನಗರ ನಿವಾಸಿಯಾಗಿದ್ದು, ಬೈಕ್ ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಹೂವಿನ ತೋಟದ ನಿವಾಸಿ ರೌಡಿ ಶೀಟರ್ ಶಿವ (35) ಎಂಬಾತನನ್ನು ಕಾಟನ್‌ಪೇಟೆ ಪೊಲೀಸ್ ವ್ಯಾಪ್ತಿಯ ಅವರ ಮನೆಯ ಸಮೀಪವೇ ಕೊಲೆ ಮಾಡಲಾಗಿದೆ.

ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಮನೆಗೆ ವಾಪಸಾಗುತ್ತಿದ್ದ ವೇಳೆ ಆತನಿಗಾಗಿಯೇ ಕಾದು ಕುಳಿತಿದ್ದ ದುಷ್ಕರ್ಮಿಗಳು ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗಿದೆ.

Latest Indian news

Popular Stories