ಬೀದರ್ : ಕಾರಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ ಹಣ ಸೀಜ್

ಬೀದರ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕಾರಿನಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ರೂಪಾಯಿಗಳನ್ನು ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ.

ಹೌದು ಕಾರಿನಲ್ಲಿ ಸೂಕ್ತದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನಹಳ್ಳಿ ಗ್ರಾಮದ ಚಂಡಕಾಪುರ ಚಿಕ್ಕ ಪೋಸ್ಟ್ ನಲ್ಲಿ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಗೋವಾದಿಂದ ತೆಲಂಗಾಣಕ್ಕೆ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

Latest Indian news

Popular Stories