Crime

ಬೀದರ್: ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನ

ಬೀದರ್,ಅ.5:- ಡಾ. ಬಿ.ಆರ್.ಅಂಬೇಡ್ಕರ ಅಭಿವೃಧ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸರ್ಕಾರ ಜಾರಿಗೆ ತರುವ ಯೋಜನೆಗಳ ಅನುಷ್ಟಾನಕ್ಕೆ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ನಾಮ ನಿರ್ದೇಶಿತ ಸದಸ್ಯರನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಮುಖಂಡರು ಅಕ್ಟೋಬರ್ 11ರೊಳಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button