
Crime
ಬೀದರ್: ವಿದ್ಯಾರ್ಥಿ ಪರಿಷತ್ ಪ್ರತಿಭಟನೆ
ಬೀದರ್,ಜ.20:- ವಿದ್ಯಾರ್ಥಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿರುವುದು ಗಂಭೀರ ಸಮಸ್ಯೆಗೆ ಕಾರಣವಾಗಿದೆ. ಕೋವಿಡ್ನಿಂದಾಗಿ ಕಷ್ಟದಲ್ಲಿರುವ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ. ಹಾಸ್ಟೆಲ್ ಆರಂಭಿಸದಿರುವುದು ಸಹ ಸಮಸ್ಯೆಗೆ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿಯವರ ಮೂಲಕ ಮುಖ್ಯಮಂತ್ರಿಯವರಿಗೆ ಕಳಿಸಿರುವ ಮನವಿಯಲ್ಲಿ ವಿದ್ಯಾರ್ಥಿ ನಾಯಕರು ಆರೋಪಿಸಿದ್ದಾರೆ.
ಶಾಲಾ ಸಮಯಕ್ಕೆ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸುವುದು, ಬಸ್ ಪಾಸ್ ಕೊಡುವುದು, ಅತಿಥಿ ಉಪನ್ಯಾಸಕರ ನೇಮಕ ಮಾಡುವುದು ವಿದ್ಯಾರ್ಥಿ ಪರಿಷತ್ತಿನ ಪ್ರಮುಖ ಬೇಡಿಕೆಯಲ್ಲಿ ಸೇರಿವೆ.
ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ರೇವಣಸಿದ್ದ ಜಾಡರ್, ನಗರ ಉಪಾಧ್ಯಕ್ಷ ನಾಗೇಶ ಬಿರಾದಾರ, ವಿಕಾಸ ಚೋರಮಲ್ಲೆ, ಸಾಯಿ ಮೂಲಗೆ, ಅರವಿಂದ ಸುಂದಳಕರ, ಕಿರಣಕುಮಾರ, ಪ್ರದಿಪರೆಡ್ಡಿ ಮುಂತಾದವರು ಪಾಲ್ಗೊಂಡಿದ್ದರು.




