ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಕಂಟ್ರೋಲ್ ರೂಂ ತೆರುವ ಬಗ್ಗೆ ಬಿಜೆಪಿ ಚಿಂತನೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕಾನೂನು ನೆರವು ನೀಡಲು ಬಿಜೆಪಿ ಕಂಟ್ರೋಲ್ ರೂಂ ತೆರೆಯುವ ಬಗ್ಗೆ ಚಿಂತನೆ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಬೆದರಿಕೆ, ತೊಂದರೆ, ಕಿರುಕುಳ ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ.ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯು ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

Latest Indian news

Popular Stories