Crime

ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ: ಕುಮಾರಸ್ವಾಮಿ

ಬೆಂಗಳೂರು, ಜ 3 (ಯುಎನ್‍ಐ):- ಎನ್.ಡಿ.ಎ ಜತೆ ಜೆಡಿಎಸ್ ವಿಲೀನವಾಗುತ್ತಿದೆ ಎಂಬ ಸುದ್ದಿಯನ್ನು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಜೆಡಿಎಸ್ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್ ಎನ್‍ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಸ್ಷಷ್ಟಪಡಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button